Headlines

ಶಿವಮೊಗ್ಗದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಬೈಂದೂರಿನಲ್ಲಿ ಅಪಘಾತ : ಇಬ್ಬರು ಸಾವು, ಹಲವರಿಗೆ ಗಾಯ

ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತ: ಶಿವಮೊಗ್ಗ ಮೂಲದ ಇಬ್ಬರ ಸಾವು, ಹಲವರಿಗೆ ಗಾಯ

A tragic accident involving a tourist bus carrying Rambhapuri College students near Trasi in Byndoor, Udupi district, claimed two lives and left several others injured.

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮುರುಡೇಶ್ವರದಿಂದ ಉಡುಪಿಯತ್ತ ಬರುತ್ತಿದ್ದ ಬಸ್, ತ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಭಾರೀ ಹಾನಿಗೊಳಗಾಗಿದೆ.

ಬಸ್‌ನಲ್ಲಿ ಒಟ್ಟು 24 ವಿದ್ಯಾರ್ಥಿಗಳು, 23 ವಿದ್ಯಾರ್ಥಿನಿಯರು ಹಾಗೂ 4 ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಮತ್ತು ಗಾಯಾಳುಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author