ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ
A college student was arrested after police found him behaving suspiciously under the influence of cannabis. Medical tests confirmed drug consumption, and a case has been registered.
ಶಿವಮೊಗ್ಗ: ನಗರದಲ್ಲಿನ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸಾರ್ವಜನಿಕ ಸ್ಥಳವೊಂದರಲ್ಲಿ ಡಿಗ್ರಿ ಓದುತ್ತಿರುವ ಯುವಕನೊಬ್ಬ ಅಸ್ವಸ್ಥನಂತೆ ತೂರಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ತಕ್ಷಣ ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ ಪೊಲೀಸರು, ಗಾಂಜಾ ಸೇವನೆ ಮಾಡಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ಯುವಕನನ್ನು ತಕ್ಷಣವೇ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಆಸ್ಪತ್ರೆಯಿಂದ ಬಂದ ವೈದ್ಯಕೀಯ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಿನೋಬಾನಗರ ಪೊಲೀಸರು ಯುವಕನ ವಿರುದ್ಧ ಮಾದಕ ವಸ್ತು ಸೇವನೆ ಸಂಬಂಧಿತ ಕಾಯ್ದೆಯಡಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್