ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ
Cupping therapy service launched at Omkar Clinic in Ripponpet, Shivamogga, offering relief from back pain, joint pain, stress, and sleep disorders with growing local response.
ರಿಪ್ಪನ್ ಪೇಟೆ: ದೈಹಿಕ ನೋವು ಹಾಗೂ ಮಾನಸಿಕ ಒತ್ತಡಕ್ಕೆ ಪರ್ಯಾಯ ಚಿಕಿತ್ಸೆಯಾಗಿ ಪ್ರಸಿದ್ಧಿ ಪಡೆಯುತ್ತಿರುವ “ಕಪ್ಪಿಂಗ್ ಥೆರಪಿ” ಇದೀಗ ರಿಪ್ಪನ್ ಪೇಟೆಯಲ್ಲಿಯೂ ಲಭ್ಯವಾಗಿದೆ. ಪಟ್ಟಣದ ಒಂಕಾರ್ ಕ್ಲಿನಿಕ್ನಲ್ಲಿ ಈ ವಿಶೇಷ ಚಿಕಿತ್ಸೆ ಆರಂಭವಾಗಿದೆ.
ಕ್ಲಿನಿಕ್ನ ತಜ್ಞರಾದ ಡಾ. ಪೂಜಾಶ್ರೀ ಅವರ ಮಾಹಿತಿ ಪ್ರಕಾರ, ಕಪ್ಪಿಂಗ್ ಥೆರಪಿ ಮೂಲಕ ಬೆನ್ನುನೋವು, ಕುತ್ತಿಗೆ ನೋವು, ಭುಜ ಹಾಗೂ ಸಂಧಿ ನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಈ ವಿಧಾನವು ರಕ್ತ ಸಂಚಲನವನ್ನು ಸುಧಾರಿಸಿ, ದೇಹದಲ್ಲಿನ ವಿಷಪದಾರ್ಥಗಳನ್ನು ಹೊರಹಾಕಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ವೈದ್ಯಕೀಯ ಮಾನದಂಡಗಳನ್ನು ಪಾಲಿಸಿಕೊಂಡು ನಡೆಸಲಾಗುವ ಈ ಚಿಕಿತ್ಸೆ ನಿದ್ರೆ ಸಮಸ್ಯೆ, ಆತಂಕ ಮತ್ತು ಮಾನಸಿಕ ಒತ್ತಡ ನಿವಾರಣೆಯಲ್ಲಿಯೂ ಸಹ ಪರಿಣಾಮಕಾರಿ ಎಂದು ತಿಳಿದುಬಂದಿದೆ. ಈಗಾಗಲೇ ಈ ಥೆರಪಿಗೆ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕ್ಲಿನಿಕ್ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ ಓಂಕಾರ್ ಕ್ಲಿನಿಕ್ ಅನ್ನು ಸಂಪರ್ಕಿಸಬಹುದು ಎಂದು ಸೂಚಿಸಲಾಗಿದೆ.
ಸಂಪರ್ಕ ಸಂಖ್ಯೆ: 7259643464
ಸ್ಥಳ: ರಿಪ್ಪನ್ ಪೇಟೆ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್