ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ
ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು.
ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು.
ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…