Headlines

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

GridArt 20260413

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act.

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಏಪ್ರಿಲ್ 12, 2026 ರಂದು ಅಣ್ಣಾನಗರ ಚಾನಲ್ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿತು.

ದಾಳಿಯ ವೇಳೆ ಮಹಮ್ಮದ್ ಅಂಬ್ರೋಸ್ (50), ಚಿಕ್ಕಲ್, ಶಿವಮೊಗ್ಗ ನಿವಾಸಿಯನ್ನು ಬಂಧಿಸಲಾಯಿತು.

ಆರೋಪಿಯಿಂದ ಅಂದಾಜು ₹85,000 ಮೌಲ್ಯದ 1 ಕೆಜಿ 720 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಆರೋಪಿಯ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 133/2026 ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 20(b)(ii)(B) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಪೊಲೀಸರ ಈ ಕಾರ್ಯಾಚರಣೆಯಿಂದ ಅಕ್ರಮ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ತಿಳಿದುಬಂದಿದೆ.