ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ
Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act.
ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಏಪ್ರಿಲ್ 12, 2026 ರಂದು ಅಣ್ಣಾನಗರ ಚಾನಲ್ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಮಹಮ್ಮದ್ ಅಂಬ್ರೋಸ್ (50), ಚಿಕ್ಕಲ್, ಶಿವಮೊಗ್ಗ ನಿವಾಸಿಯನ್ನು ಬಂಧಿಸಲಾಯಿತು.
ಆರೋಪಿಯಿಂದ ಅಂದಾಜು ₹85,000 ಮೌಲ್ಯದ 1 ಕೆಜಿ 720 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 133/2026 ಅಡಿಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 20(b)(ii)(B) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಪೊಲೀಸರ ಈ ಕಾರ್ಯಾಚರಣೆಯಿಂದ ಅಕ್ರಮ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್