w
Headlines
Home » ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ

Kfd

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox

ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಚಿಕಿತ್ಸೆಗೂ ಸ್ಪಂದಿಸದೆ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯತೆ ಎದುರಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.