ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect.

ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ ಅವರು, 2008ರಲ್ಲಿ ಹೊಸನಗರ ತಾಲೂಕು ತನ್ನ ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಂಡ ಬಳಿಕ ಕಳೆದ 18 ವರ್ಷಗಳಿಂದ ಅಭಿವೃದ್ಧಿ ಹಿನ್ನಡೆ ಅನುಭವಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಇತರ ರಾಜ್ಯಗಳಲ್ಲಿ ಕೇವಲ 10ರಿಂದ 15 ಸಾವಿರ ಮತದಾರರಿದ್ದರೂ ಪ್ರತ್ಯೇಕ ಕ್ಷೇತ್ರಗಳಿರುವುದನ್ನು ಉದಾಹರಿಸಿದ ಅವರು, ಹೊಸನಗರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತದಾರರು ಹಾಗೂ ಸುಮಾರು 175 ಕಿ.ಮೀ ವ್ಯಾಪ್ತಿಯ ಭೌಗೋಳಿಕ ವಿಸ್ತೀರ್ಣ ಇದ್ದರೂ ಕ್ಷೇತ್ರವಿಲ್ಲದಿರುವುದು ಅನ್ಯಾಯಕರವಾಗಿದೆ ಎಂದು ತಿಳಿಸಿದ್ದಾರೆ.

ಕ್ಷೇತ್ರ ಮರುಸ್ಥಾಪನೆಗಾಗಿ ಇದೇ ತಿಂಗಳ 5 ಮತ್ತು 6ರಂದು 96 ವರ್ಷದ ಹಿರಿಯ ರಾಜಕಾರಣಿ ಬಿ. ಸ್ವಾಮಿರಾವ್ ಅವರ ನೇತೃತ್ವದಲ್ಲಿ ಸಾಗರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ 45 ಕಿಲೋಮೀಟರ್ ಪಾದಯಾತ್ರೆ ನಡೆದಿದ್ದು, ಸಾವಿರಾರು ಜನರು ಜಾತಿ-ಧರ್ಮ ಭೇದವಿಲ್ಲದೆ ಭಾಗವಹಿಸಿರುವುದು ಗಮನಾರ್ಹವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದೇ ವಿಚಾರವಾಗಿ ತಾಲ್ಲೂಕಿನ ಜನಪ್ರತಿನಿಧಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂಸದರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಹ ಪತ್ರ ಬರೆದಿರುವುದಾಗಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಸಂಬಂಧಪಟ್ಟ ಸಮಿತಿಗೆ ಶಿಫಾರಸು ಮಾಡಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

16 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

19 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago