ಹೊಸನಗರದಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

ಹೊಸನಗರದಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

Power outage scheduled in Hosanagara on April 12, 2026, from 10 AM to 6 PM due to maintenance and reconductoring work on the 33 KV Sagar–Hosanagara line, affecting multiple villages and town areas.

ಹೊಸನಗರ ಉಪವಿಭಾಗ ವ್ಯಾಪ್ತಿಯಲ್ಲಿ ಭಾನುವಾರ (12.04.2026) ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33 ಕೆ.ವಿ ಸಾಗರ–ಹೊಸನಗರ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಹಾಗೂ ರೀ-ಕಂಡಕ್ಟರಿಂಗ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಪವರ್ ಕಟ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ, ಎಂ.ಗುಡ್ಡೆಕೊಪ್ಪ, ಕರಿಂಗೊಳ್ಳಿ ಗ್ರಾಮ ಪಂಚಾಯಿತಿ ಹಾಗೂ ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಹೊಸನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಚಂದ್ರಶೇಖರ್ ಅವರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

7 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

7 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

9 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

10 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

17 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

17 hours ago