w
Headlines
Home » ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

GridArt 20260410

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.


“ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ” ಎಂದು ಪ್ರಾರ್ಥಿಸಿರುವ ಮುಖ್ಯಮಂತ್ರಿ, ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿರುವುದು ನೋವಿನ ಸಂಗತಿ ಎಂದು ಅವರು ತಿಳಿಸಿದ್ದಾರೆ.

ಇನ್ನು, ಶಿವಮೊಗ್ಗ ಸಮೀಪದ ಹುಲಿಕಲ್ ಘಾಟಿಯಲ್ಲಿ ನಡೆದ ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಜಾರಿದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತರನ್ನು ರಾಘವೇಂದ್ರ (37), ತಂದೆ ಕೃಷ್ಣಮೂರ್ತಿ, ವಾಸ ಚಕ್ಕಾರು ನಗರ, ಹೊಸನಗರ ತಾಲ್ಲೂಕು; ರಾಜು (30), ವಾಸ ನೀಲವಗಲ್ಲು, ಹಾವೇರಿ ತಾಲ್ಲೂಕು; ಹಾಗೂ ಶಬ್ಬೀರ್ (40), ವಾಸ ನೆಲವಗಲ್ಲು ಎಂದು ಗುರುತಿಸಲಾಗಿದೆ. ಮೃತರ ಕುಟುಂಬಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದೇ ಘಟನೆಯಲ್ಲಿ ಸುಮಂತ, ಪರಮೇಶ್, ಸಚಿನ್ ಮತ್ತು ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದು, ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.