ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..!
Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಮಾರಾಟ ಮಾಡುವುದರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಇಬ್ಬರ ವಿರುದ್ಧ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಶನಿವಾರ ರಾತ್ರಿ ಸುಮಾರು 8:15 ಗಂಟೆಗೆ ಬೆಳ್ಳೂರು ಗ್ರಾಮದ ಚಂದ್ರಪ್ಪ (60), ಕಿರಾಣಿ ಅಂಗಡಿ ಮುಂದೆ ಸಾರ್ವಜನಿಕರಿಗೆ ಚಿಲ್ಲರೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರೆಂದು ಮಾಹಿತಿ ಬಂದ ಹಿನ್ನೆಲೆ, ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು ವ್ಯಕ್ತಿಯ ವಿರುದ್ದ ಕ್ರಮ ಕೈಗೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಶನಿವಾರ ಬೆಳ್ಳೂರು ಗ್ರಾಮದ ಶರತ್ (40) ಎಂಬ ವ್ಯಕ್ತಿ ತನ್ನ ಕಿರಾಣಿ ಅಂಗಡಿ ಮುಂದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರೆಂದು ಮಾಹಿತಿ ದೊರಕಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ 3 ಖಾಲಿ ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ದ ಕ್ರಮ ಕೈಗೊಂಡಿದ್ದಾರೆ.
ಎರಡೂ ಪ್ರಕರಣಗಳು ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 32(3) ಅಡಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ರಾಮಚಂದ್ರ , ವಿಶ್ವನಾಥ್ , ಉಮೇಶ್ ಹಾಗೂ ಅವಿನಾಶ್ ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…