ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು
A cow died after a tree fell during illegal tree cutting in a forest area at Neerulli near Thirthahalli. Police have registered a case and started investigation.
ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ತಾಲೂಕಿನ ಹಾರೋಗೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಳಿಮಠ ಸಮೀಪದ ನೀರುಳ್ಳಿಯಲ್ಲಿ ಕೌಶಿಕ್ ಎಂಬಾತ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುತ್ತಿದ್ದನು ಎಂದು ತಿಳಿದುಬಂದಿದೆ. ಈ ವೇಳೆ ಆಹಾರಕ್ಕಾಗಿ ಮರದ ಸೊಪ್ಪು ತಿನ್ನಲು ಬಂದಿದ್ದ ಹಸುವಿನ ಮೇಲೆ ಅಕಸ್ಮಿಕವಾಗಿ ಮರ ಬಿದ್ದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿದೆ.
ಮೃತ ಹಸು ಕುಂದೇಕೊಪ್ಪ ಗ್ರಾಮದ ಮಂಜುನಾಥ್ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…