ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ


ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ

Rosna Rinsha secures 96% marks and tops KPC High School, Jog, as the school achieves 100% SSLC result for the first time in its history.

ಜೋಗ: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೋಗದ ಕೆಪಿಸಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಈ ಸಾಧನೆಯಲ್ಲಿ ವಿದ್ಯಾರ್ಥಿನಿ ರೋಸ್ನಾ ರಿಂಷಾ ವಿಶೇಷವಾಗಿ ಮಿಂಚಿದ್ದು, 625ಕ್ಕೆ 595 ಅಂಕಗಳನ್ನು ಪಡೆದು 96% ಸಾಧನೆ ಮಾಡುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕನ್ನಡದಲ್ಲಿ 122, ಇಂಗ್ಲಿಷ್‌ನಲ್ಲಿ 96, ಹಿಂದಿಯಲ್ಲಿ 99, ಗಣಿತದಲ್ಲಿ 94, ವಿಜ್ಞಾನದಲ್ಲಿ 86 ಹಾಗೂ ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಗಳಿಸಿರುವುದು ಆಕೆಯ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಕಾರ್ಗಲ್ ಗ್ರಾಮದ ನಿವಾಸಿಗಳಾದ ನಾಸೀರ್ ಹಾಗೂ ಮೈನಾ ದಂಪತಿಗಳ ಪುತ್ರಿಯಾದ ರೋಸ್ನಾ ರಿಂಷಾ ತನ್ನ ಸಾಧನೆಯ ಮೂಲಕ ಕುಟುಂಬಕ್ಕೂ, ಶಾಲೆಗೂ ಹಾಗೂ ಊರಿಗೂ ಕೀರ್ತಿ ತಂದಿದ್ದಾಳೆ. ಆಕೆಯ ಈ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಐವತ್ತಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಕೆಪಿಸಿ ಪ್ರೌಢಶಾಲೆ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದಿದೆ. ದುಬಾರಿ ಶುಲ್ಕಗಳನ್ನು ಕಟ್ಟಿಕೊಂಡು ಮಕ್ಕಳನ್ನು ಸಾಗರ, ಶಿವಮೊಗ್ಗ ಅಥವಾ ದಕ್ಷಿಣ ಕನ್ನಡ ಜಿಲ್ಲೆಗಳ ಕಡೆ ಕಳುಹಿಸುವ ಬದಲು, ಸ್ಥಳೀಯ ಶಾಲೆಯಲ್ಲಿಯೇ ಉತ್ತಮ ಫಲಿತಾಂಶ ದೊರೆಯಬಹುದು ಎಂಬುದನ್ನು ಈ ಸಾಧನೆ ತೋರಿಸಿದೆ.

ಶಾಲೆಯ ಸಾಧನೆಗೆ ಶಿಕ್ಷಕ ವೃಂದ, ಪೋಷಕರು ಹಾಗೂ ಸ್ಥಳೀಯರ ಸಹಕಾರವೇ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

17 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

18 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

18 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago