w
Headlines
Home » ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

GridArt 20260407

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga.

ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಾಜಿ ಸಚಿವ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ ಬಿಜೆಪಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ವೇಳೆ “ಭಾರತ್ ಮಾತಾ ಕೀ ಜೈ” ಮತ್ತು “ವಂದೇ ಮಾತರಂ” ಘೋಷಣೆಗಳು ಮೊಳಗಿದವು.

ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲದೆ ದೇಶದ ಅಭಿವೃದ್ಧಿ, ಸಾಂಸ್ಕೃತಿಕ ಮೌಲ್ಯಗಳು ಮತ್ತು ರಾಷ್ಟ್ರಭಕ್ತಿಯನ್ನು ಪ್ರತಿಬಿಂಬಿಸುವ ಮಹತ್ವದ ಚಳುವಳಿಯಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು. ಗ್ರಾಮೀಣ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಕರೆ ನೀಡಿದರು.

ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಕಾರ್ಯಕರ್ತರ ತ್ಯಾಗ, ಶ್ರಮ ಮತ್ತು ನಿಷ್ಠೆಯೇ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು. ಬೂತ್ ಮಟ್ಟದ ಸಂಘಟನೆ ಬಲವಾಗಿದ್ದರೆ ಮಾತ್ರ ಪಕ್ಷದ ಗೆಲುವು ಖಚಿತವಾಗುತ್ತದೆ ಎಂದು ಅವರು ತಿಳಿಸಿದರು.

ಮಂಡಲ ಅಧ್ಯಕ್ಷ ಎನ್. ಸತೀಶ್ ಮಾತನಾಡಿ, ಕೆರೆಹಳ್ಳಿ ಮಹಾಶಕ್ತಿ ಕೇಂದ್ರವು ಸದಾ ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಘಟಿತವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಕೈಗೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡ ಸುರೇಶ್ ಸಿಂಗ್ ಸ್ವಾಗತಿಸಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್ ಕಾರ್ಯಕರ್ತರನ್ನು ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಬೂತ್ ಅಧ್ಯಕ್ಷ ಸುಧೀರ್, ಪ್ರಭಾರಿ ಪದ್ಮಿನಿ ರಾವ್ ಸೇರಿದಂತೆ ಮಂಡಲ ಮತ್ತು ಜಿಲ್ಲಾ ಮಟ್ಟದ ಹಲವು ಮುಖಂಡರು, ಮಹಿಳಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಇದೇ ವೇಳೆ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ ಅವರ ಸೇವೆಯನ್ನು ಗೌರವಿಸಲಾಯಿತು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.