Headlines

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ

A KSRTC bus and a truck collided near Kugve in Sagar taluk, leaving a woman passenger injured. Police have visited the spot and initiated an investigation.

ಸಾಗರ: ತಾಲೂಕಿನ ಕುಗ್ಗ್ವೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.

ಸಾಗರದಿಂದ ಜೋಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಾಳಗುಪ್ಪ ಭಾಗದಿಂದ ಸಾಗರದತ್ತ ಬರುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮವಾಗಿ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮಹಿಳೆಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Exit mobile version