ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು.

ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ ಬದಲಾಗಿರಿ. ಹೊಸ ನಾಡು ಕಟ್ಟಲು ಮುಂದಾಗಿರಿ. ಜಾತಿ ಪಕ್ಷ ಮರೆತು ಒಂದಾಗಿರಿ…’ ಎಂಬ ಘೋಷವಾಕ್ಯಗಳೊಂದಿಗೆ ಈ ಪಾದಯಾತ್ರೆ ನಡೆಯಲಿದೆ. ಜಾತಿ-ಮತ ಭೇದ ಮರೆತು ಎಲ್ಲರೂ ಒಂದಾಗಿ ಕ್ಷೇತ್ರದ ಮರುಸ್ಥಾಪನೆಗಾಗಿ ಹೋರಾಟ ನಡೆಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ.

ಏಪ್ರಿಲ್ 5ರಂದು ನಗರದಿಂದ ಪಾದಯಾತ್ರೆ ಪ್ರಾರಂಭವಾಗಿ, 96 ವರ್ಷದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರ ನೇತೃತ್ವದಲ್ಲಿ ನಡೆಯಲಿದ್ದು, ಈಗಾಗಲೇ ತಾಲ್ಲೂಕು ವ್ಯಾಪ್ತಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ ‘ಹೊಸನಗರ ವಿಧಾನಸಭಾ ಕ್ಷೇತ್ರ ಬೇಕೇ ಬೇಕು’ ಎಂಬ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು.

ಮಾಜಿ ಶಾಸಕ ಬಿ.ಸ್ವಾಮಿರಾವ್ ಮಾತನಾಡಿ, ಮರುವಿಂಗಡಣೆಯ ವೇಳೆ ಹೊಸನಗರ ಕ್ಷೇತ್ರವನ್ನು ವಿಂಗಡಿಸಿ ಸಾಗರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಲಾಗಿದೆ. ಇದರಿಂದ ಅಭಿವೃದ್ಧಿ ಹಿನ್ನಡೆಯಾಗಿದೆ. ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಹೊಸನಗರ ಕ್ಷೇತ್ರ ಮರುಸ್ಥಾಪನೆ ಅಗತ್ಯವಿದೆ ಎಂದು ಹೇಳಿದರು. ಪ್ರತಿಯೊಂದು ಮನೆಯಿಂದ ಕನಿಷ್ಠ ಒಬ್ಬರು ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ, ಪಾದಯಾತ್ರೆ ಯಶಸ್ವಿಗೆ ಮೂರು ತಂಡಗಳನ್ನು ರಚಿಸಲಾಗಿದ್ದು, ಭಾಗವಹಿಸುವವರಿಗೆ ಊಟೋಪಚಾರ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭ ಮುಖಂಡರಾದ ಚಂದ್ರಮೌಳಿಗೌಡ, ಎನ್.ಆರ್.ದೇವಾನಂದ, ಎನ್.ವರ್ತೇಶ್, ವೀರೇಶ್ ಆಲವಳ್ಳಿ, ಆರ್.ಎ.ಚಾಬುಸಾಬ್, ಬಂಡಿ ರಾಮಚಂದ್ರ, ಸುರೇಶ್ ಸ್ವಾಮಿರಾವ್, ಪದ್ಮಾ ಸುರೇಶ್, ನಾಗರತ್ನ ದೇವರಾಜ್, ವಾಣಿ ಗೋಂದಪ್ಪ, ಆರ್.ಡಿ. ಶೀಲಾ, ಶೈಲಾ ಆರ್.ಪ್ರಭು, ಶಾಹಿದಾಬಾನು, ಡಿ.ಈ. ಮಧುಸೂದನ್, ಆಸಿಫ್ ಬಾಷಾ, ನಿರೂಪ್ ಕುಮಾರ್, ಚಿದಂಬರ್ ಹೂವಿನಕೋಣೆ, ಗಣಪತಿ ಗವಟೂರು, ಜಿ.ಡಿ. ಮಲ್ಲಿಕಾರ್ಜುನ, ಧನಲಕ್ಷ್ಮಿ ಸೇರಿದಂತೆ ಅನೇಕರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago