ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ
ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಶಾಸಕರಿಗೆ ನೀಡಲಾಗುತ್ತಿದ್ದ ಉಚಿತ ಐಪಿಎಲ್ ಟಿಕೆಟ್‌ಗಳನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಕಳೆದ ವರ್ಷದ ಐಪಿಎಲ್ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಸ್ಮರಿಸಿಕೊಂಡ ಅವರು, ಆ ನೋವಿನ ನಡುವೆ ಟಿಕೆಟ್‌ಗಾಗಿ ಆಸಕ್ತಿ ತೋರಿಸುವುದು ಜನರ ದೃಷ್ಟಿಯಲ್ಲಿ ಅಸಮಂಜಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಬಾರಿ ರಾಜ್ಯ ಸರ್ಕಾರವು ಪ್ರತಿ ಶಾಸಕರಿಗೂ 3 ಉಚಿತ ಐಪಿಎಲ್ ಟಿಕೆಟ್‌ಗಳನ್ನು ನೀಡಲು ನಿರ್ಧರಿಸಿತ್ತು. ಹಿಂದಿನ ಸದನದಲ್ಲಿ ಕೆಲ ಶಾಸಕರು ಉಚಿತ ಟಿಕೆಟ್‌ಗಾಗಿ ಒತ್ತಾಯಿಸಿದ್ದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕೆಲವು ಶಾಸಕರು ಇದನ್ನು ವಿರೋಧಿಸಿದ್ದು, ಇದೀಗ ಚನ್ನಬಸಪ್ಪ ಕೂಡ ಆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, “ಕಳೆದ ವರ್ಷದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಆಕ್ರಂದನ ಇನ್ನೂ ಮನಸ್ಸಿನಲ್ಲಿ ಮೂಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಟಿಕೆಟ್‌ಗಾಗಿ ಪಟ್ಟು ಹಿಡಿಯುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.
ಹಾಗೆಯೇ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರ ಅಥವಾ ಕೆ.ಎಸ್.ಸಿ.ಎ ವತಿಯಿಂದ ನೀಡಲಾಗುವ ಯಾವುದೇ ಐಪಿಎಲ್ ಟಿಕೆಟ್ ಅಥವಾ ಪಾಸ್‌ಗಳನ್ನು ಸವಿನಯವಾಗಿ ನಿರಾಕರಿಸುತ್ತಿರುವುದಾಗಿ ಹೇಳಿದ್ದಾರೆ. ಮುಂಬರುವ ಪಂದ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರಿನಲ್ಲಿ ಯಾವುದೇ ಟಿಕೆಟ್ ವಿತರಿಸಬಾರದೆಂದು ಅವರು ಮನವಿ ಮಾಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…