ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office.

ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು.

ಪ್ರತಿಭಟನಾಕಾರರು ಕುಲಪತಿ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಚೇರಿಯ ಪೀಠೋಪಕರಣಗಳು ಹಾಗೂ ಇತರ ಸಾಮಗ್ರಿಗಳನ್ನು ಧ್ವಂಸಗೊಳಿಸಿರುವುದು ಗಮನಾರ್ಹವಾಗಿದೆ.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ವಿರೋಧಿ ಧೋರಣೆ ಹೆಚ್ಚುತ್ತಿರುವುದಾಗಿ ಆರೋಪಿಸಿದ ಎನ್.ಎಸ್.ಯು.ಐ ಜಿಲ್ಲಾ ಘಟಕ, ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ಐದು ತಿಂಗಳಿಂದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗದೇ ಇರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಲ್ಲದೆ, ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸಿದೆ. ಅಂಕಪಟ್ಟಿಗಳಿಲ್ಲದೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಅವಕಾಶಗಳು ಕೈ ತಪ್ಪುತ್ತಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.

ಇನ್ನೂ, ಪರೀಕ್ಷಾ ಶುಲ್ಕ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಭಾರವಾಗಿದೆ. ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ದೋಷಗಳಿಂದ ಫಲಿತಾಂಶಗಳಲ್ಲಿ ಗೊಂದಲ ಉಂಟಾಗಿದ್ದು, ಪಾಸ್ ಆದವರನ್ನು ಫೇಲ್ ಎಂದು ತೋರಿಸುವ ಪ್ರಕರಣಗಳು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿವೆ.

ಈ ಎಲ್ಲಾ ಅವ್ಯವಸ್ಥೆಗಳ ಹಿನ್ನೆಲೆ ಕುಲಪತಿಗಳನ್ನು ತಕ್ಷಣ ವಜಾಗೊಳಿಸಬೇಕೆಂದು ಎನ್.ಎಸ್.ಯು.ಐ ಆಗ್ರಹಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

3 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

3 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

5 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

13 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

13 hours ago