ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ
A 35-year-old nurse from Shivamogga died by suicide after jumping from a bridge into the Tunga River near Muduba in N.R. Pura taluk of Chikkamagaluru district. Police have registered a case and investigation is ongoing.
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುಡುಬ ಬಳಿ ದುರ್ಘಟನೆ ಸಂಭವಿಸಿದ್ದು, ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುತ್ತಿನಕೊಪ್ಪ ಮೂಲದ 35 ವರ್ಷದ ರನ್ಯಾ ಎಂಬವರು ಈ ದುರ್ಘಟನೆಯಲ್ಲಿ ಮೃತಪಟ್ಟವರು.
ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ರನ್ಯಾ, ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಈ ನಡುವೆ, ಮುಡುಬ ಸಮೀಪದ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರಿಗೆ ತೀವ್ರ ಆಘಾತ ಉಂಟುಮಾಡಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್