ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness.

ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು.

ಪಟ್ಟಣದ ಗುಡ್‌ಶಪರ್ಡ್ ಶಾಲಾ ಆವರಣದಲ್ಲಿ ನಡೆದ ಓಂ ಶ್ರೀಮಾತೃಶ್ರೀ ಸೇವಾ ಸಮಿತಿ (ರಿ) ಎನ್‌ಜಿಒ ಉದ್ಘಾಟನಾ ಸಮಾರಂಭ ಹಾಗೂ ಉಡುಪಿ ಆದರ್ಶ ಆಸ್ಪತ್ರೆಯ ವತಿಯಿಂದ ಆಯೋಜಿಸಲಾದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ವೈದ್ಯ ನಾರಾಯಣೋ ಹರಿ” ಎಂಬ ನಾಣ್ಣುಡಿಯಂತೆ ವೈದ್ಯಕೀಯ ಸೇವೆ ಪವಿತ್ರವಾದುದು. ಆದರೆ ಗ್ರಾಮೀಣ ಪ್ರದೇಶದ ಜನರು ದಿನನಿತ್ಯದ ದುಡಿಮೆಯಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯದ ಕಡೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಜ್ಞ ವೈದ್ಯರ ತಂಡವನ್ನು ಗ್ರಾಮಗಳಿಗೆ ಕರೆಸಿ, ಜನರ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ ನಡೆಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ನಿಟ್ಟೂರು ನಾರಾಯಣಗುರು ಸಂಸ್ಥಾನ ಮಠದ ರೇಣುಕಾನಂದ ಸ್ವಾಮಿಜಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತ, ಗ್ರಾಮೀಣ ಭಾಗಗಳಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ನಿಯಮಿತವಾಗಿ ಆಯೋಜಿಸುವುದರಿಂದ ಜನರಲ್ಲಿ ಉಂಟಾಗುವ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜನರು ದುಡಿಮೆಯಲ್ಲೇ ತೊಡಗಿಸಿಕೊಂಡು ತಮ್ಮ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಆರೋಗ್ಯವಂತರಾಗಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಸರ್ಕಾರವು ಆಯುಷ್ಮಾನ್ ಕಾರ್ಡ್, ಯಶಸ್ವಿನಿ ಕಾರ್ಡ್ ಸೇರಿದಂತೆ ಹಲವು ಯೋಜನೆಗಳ ಮೂಲಕ ದುಬಾರಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡುತ್ತಿದೆ. ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಆರಂಭಿಸಿದ್ದ ಶೂಶ್ರುಷ ಯೋಜನೆಯು ಗ್ರಾಮೀಣ ಜನತೆಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಸ್ಮರಿಸಿದರು. ಇತ್ತೀಚಿನ ವರ್ಷಗಳಲ್ಲಿ ವೈದ್ಯಕೀಯ ಕ್ಷೇತ್ರವು ವ್ಯಾಪಾರೀಕರಣದ ದಾರಿಗೆ ತಿರುಗುತ್ತಿರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ವೈದ್ಯಕೀಯ ಸೇವೆ ಮಾನವೀಯತೆಯೊಂದಿಗೆ ನಡೆದುಕೊಂಡಾಗ ಮಾತ್ರ ಅದರ ಪವಿತ್ರತೆ ಉಳಿಯುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಓಂ ಶ್ರೀಮಾತೃಶ್ರೀ ಸೇವಾ ಸಮಿತಿ ಅಧ್ಯಕ್ಷೆ ಲೇಖನ ಜಿ. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ಶಿಬಿರದಲ್ಲಿ 650ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡರು.

ಜಿಲ್ಲಾ ಸಹಕಾರ ಬ್ಯಾಂಕ್ ಆಧ್ಯಕ್ಷ ಆರ್.ಎಂ.ಮಂಜುನಾಥಗೌಡರು,ಶಿಮುಲ್ ಅಧ್ಯಕ್ಷ ವಿದ್ಯಾದರ್, ಆದರ್ಶ ಅಸ್ಪತ್ರೆಯ ಮುಖ್ಯಸ್ಥ ಡಾ.ಜಿ.ಎಸ್.ಚಂದ್ರಶೇಖರ್, ಪತ್ರಕರ್ತ ರಫಿ ರಿಪ್ಪನ್ ಪೇಟೆ , ಮಂಜುನಾಥ ಭದ್ರಾವತಿ, ಉದ್ಯಮಿ ವಿನಾಯಕ, ಕಾರ್ಯದರ್ಶಿ ಹೇಮಾಂಬಿಕ,ಉಮಾ,ಸಂಗೀತಷಾಜಿ,ಸುಶೀಲ ಕೆ,ಅಜೇಶ್,  ತ್ರಿವೇಣಿ,ಸಾಜಿದಾ,ಮೊಹಮ್ಮದ್ ಜಹೀರ್ ಇನ್ನಿತರರು ಪಾಲ್ಗೊಂಡಿದರು.

ಪಿಯೂಸ್ ರೋಡ್ರಿಗಸ್ ಪ್ರಾರ್ಥನೆ ಸಲ್ಲಿಸಿದರು. ಸಬಾಸ್ಟಿನ್ ಮ್ಯಾಥ್ಯೂಸ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

9 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

10 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago