ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್‌ ಶ್ವೇತಾ (30) ಅವರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಗ್ಗೆ ಕುಟುಂಬಸ್ಥರ ಗಂಭೀರ ಆರೋಪ ಕೇಳಿಬಂದಿದೆ.

ವರದಕ್ಷಿಣೆ ಕಿರುಕುಳವೇ ಈ ದುರಂತಕ್ಕೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಉಳವಿಯ ಮಂಜಪ್ಪ–ನಾಗರತ್ನ ದಂಪತಿಯ ಪುತ್ರಿಯಾದ ಶ್ವೇತಾ, ನವೀನ್ ಅವರನ್ನು ಪ್ರೀತಿಸಿ 2020ರ ಮೇ ತಿಂಗಳಲ್ಲಿ ವಿವಾಹವಾಗಿದ್ದರು. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು ಇದ್ದು, ಮತ್ತೊಮ್ಮೆ ತಾಯಿಯಾಗುವ ಸಂಭ್ರಮದಲ್ಲಿದ್ದ ಶ್ವೇತಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಸಮಾಜ ಸೇವೆಯ ಮನೋಭಾವ ಹೊಂದಿದ್ದ ಅವರು ನರ್ಸ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.

ಆದರೆ, ವೈವಾಹಿಕ ಜೀವನ ಸುಖಕರವಾಗಿರಲಿಲ್ಲ. ಅತ್ತೆ ಜಾನಕಿ, ಮಾವ ಸಣ್ಣಪ್ಪ ಸೇರಿದಂತೆ ಮನೆಯ ಕೆಲವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಹಿರಿಯ ಮಗನ ಮೇಲೆ ಹೆಚ್ಚಿನ ಮಮತೆ ತೋರಿಸುತ್ತಿದ್ದ ಕುಟುಂಬಸ್ಥರು, ನವೀನ್ ಮತ್ತು ಶ್ವೇತಾ ವಿರುದ್ಧ ದ್ವೇಷಪೂರ್ವಕವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ.

ಮಾರ್ಚ್ 29ರಂದು ಮನೆಯಲ್ಲಿ ನಡೆದ ಕ್ಷುಲ್ಲಕ ಜಗಳ ಭೀಕರ ತಿರುವು ಪಡೆದುಕೊಂಡಿತು. ಈ ಜಗಳವು ರಾಜಿ ಪಂಚಾಯಿತಿಯಲ್ಲಿ ಮುಗಿಯಬೇಕಿದ್ದರೂ, ಆರೋಪಿಗಳು ಕ್ರೌರ್ಯದ ಮಿತಿ ಮೀರಿ ನಡೆದುಕೊಂಡಿದ್ದಾರೆ. ನಡುಮನೆಯಲ್ಲೇ ಶ್ವೇತಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಪರಿಣಾಮವಾಗಿ, ಅವರ ದೇಹದ ಶೇ.90ರಷ್ಟು ಭಾಗ ಸುಟ್ಟು ಕರಕಲಾಗಿದೆ ಎಂದು ಕುಟುಂಬಸ್ಥರು ಆರೋಪಿಸುತಿದ್ದಾರೆ.

ತೀವ್ರವಾಗಿ ಗಾಯಗೊಂಡ ಶ್ವೇತಾರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೂರು ದಿನಗಳ ಕಾಲ ಜೀವ-ಮರಣದ ಮಧ್ಯೆ ಹೋರಾಡಿದ ಅವರು, ಏಪ್ರಿಲ್ 1ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಅವರ ಹೊಟ್ಟೆಯಲ್ಲಿದ್ದ ಐದು ತಿಂಗಳ ಗರ್ಭದಲ್ಲಿದ್ದ ಶಿಶುವನ್ನು ಉಳಿಸಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದರೂ ಪ್ರಯತ್ನ ವಿಫಲವಾಯಿತು.

ಘಟನೆಯ ಬಗ್ಗೆ ಶ್ವೇತಾ ತಾಯಿ ನಾಗರತ್ನ ಆಕ್ರೋಶ ವ್ಯಕ್ತಪಡಿಸಿದ್ದು, “ಅತ್ತೆ ಜಾನಕಿ, ಮಾವ ಸಣ್ಣಪ್ಪ, ದೊಡ್ಡ ಮಗ ಹೇಮಂತ್, ಅವರ ಪತ್ನಿ ದಿವ್ಯ ಸೇರಿದಂತೆ ಕುಟುಂಬದವರು ಸೇರಿ ನನ್ನ ಮಗಳನ್ನು ಹತ್ಯೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ತಮ್ಮ ಯೋಗೇಶ್ ಕೂಡ “ಇದು ಆತ್ಮಹತ್ಯೆಯಲ್ಲ, ಖಚಿತವಾಗಿ ಕೊಲೆ” ಎಂದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಪತಿ ನವೀನ್ ಅವರೂ ಕುಟುಂಬದವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ಹಾಗೂ ಶ್ವೇತಾಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎಂದು ಹೇಳಿದ್ದಾರೆ.

ಸದ್ಯಕ್ಕೆ ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಈ ಘಟನೆ ಮತ್ತೊಮ್ಮೆ ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗಿನ ಕ್ರೂರತೆಯನ್ನು ಬಯಲಿಗೆಳೆದಿದ್ದು, ಸಮಾಜದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯ ದೊರಕಬೇಕು ಎಂಬುದು ಕುಟುಂಬಸ್ಥರು ಮತ್ತು ಸಾರ್ವಜನಿಕರ ಒಕ್ಕೂಟದ ಆಗ್ರಹವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago