Categories: Blog

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

Prerana Rao from Shivamogga wins gold medal in MSc Cyber Security and Digital Forensics at Rashtriya Raksha University’s 5th convocation held in Ahmedabad.

ಶಿವಮೊಗ್ಗ, ಏ.16: ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಮೂಲದ ಪ್ರೇರಣಾ ಕೆ. ರಾವ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂಎಸ್ಸಿ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್ (CS&FD) ವಿಭಾಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಅವರಿಗೆ ಈ ಗೌರವ ಲಭಿಸಿದೆ.

ಕಾಶಿ ವಿಶ್ವನಾಥ್ ಹಾಗೂ ಪದ್ಮಿನಿ ವಿಶ್ವನಾಥ್ ದಂಪತಿಯ ಪುತ್ರಿಯಾಗಿರುವ ಪ್ರೇರಣಾ ರಾವ್ ಅವರಿಗೆ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪದಕ ಪ್ರದಾನ ಮಾಡಿದರು.

ಈ ಘಟಿಕೋತ್ಸವ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಲವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರಾಯ್, ರಾಷ್ಟ್ರೀಯ ರಕ್ಷಾ ವಿವಿಯ ಉಪಕುಲಪತಿ ಬಿಮಲ್ ಎನ್. ಪಟೇಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪ್ರೇರಣಾ ಅವರ ಸಾಧನೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

2 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

3 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

17 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

17 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

24 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago