ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ
An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death.
ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು ಪತ್ತೆ ಮಾಡುವುದು ಕಷ್ಟಕರವಾಗಿದೆ.
ಇಂದು ಸಂಜೆ ಸುಮಾರು 4:45ರ ವೇಳೆಗೆ ತಾಳಗುಪ್ಪ–ಮೈಸೂರು ಪ್ರಯಾಣಿಕ ರೈಲುಗೆ ಸಿಲುಕಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಲೊಕೊಮೋಟಿವ್ ಇಂಜಿನ್ ಪೈಲಟ್ ರೈಲು ನಿಲ್ದಾಣಕ್ಕೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಇದು ರೈಲು ಅಪಘಾತವೇ ಅಥವಾ ಬೇರೆ ರೀತಿಯ ಅನುಮಾನಾಸ್ಪದ ಸಾವು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮೃತದೇಹದ ಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಘಟನೆ ನಡೆದಿರುವ ರವೀಂದ್ರನಗರ ಹಾಗೂ ಬಸವೇಶ್ವರನಗರ ಭೋವಿ ಕಾಲೋನಿ ಪ್ರದೇಶದಲ್ಲಿ ಹಲವು ಪಿಜಿ ಹಾಸ್ಟೆಲ್‌ಗಳು ಇರುವುದರಿಂದ, ಮೃತ ಯುವತಿ ಹಾಸ್ಟೆಲ್ ನಲ್ಲಿ ಇದ್ದವಳೋ ಅಥವಾ ಬೇರೆಡೆಯಿಂದ ಬಂದವರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…