w
Headlines
Home » RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

GridArt 20260423

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance.

ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 31 ವಿದ್ಯಾರ್ಥಿಗಳಲ್ಲಿ ಎಲ್ಲಾ 31 ಮಂದಿ ಉತ್ತೀರ್ಣರಾಗಿದ್ದು, ಶಾಲೆಯ ಸಾಧನೆಗೆ ಮತ್ತಷ್ಟು ಮೆರುಗು ತಂದಿದೆ. ವಿದ್ಯಾರ್ಥಿನಿ ಸುರಕ್ಷಾ ಪಾಟೀಲ್ 625ರಲ್ಲಿ 577 ಅಂಕಗಳನ್ನು (92.32%) ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಅದೇ ರೀತಿ ಆದ್ವಿ ಎಸ್. ಭೂಷಣ್ 625ರಲ್ಲಿ 567 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿದ್ದಾಳೆ. ಇನ್ನೊಬ್ಬ ಪ್ರತಿಭಾವಂತ ವಿದ್ಯಾರ್ಥಿನಿ ಅದಿತಿ 625ರಲ್ಲಿ 566 ಅಂಕಗಳನ್ನು ಗಳಿಸಿದ್ದು, ವಿಶೇಷವಾಗಿ ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದು ಗಮನ ಸೆಳೆದಿದ್ದಾಳೆ.

ಫಲಿತಾಂಶದ ವಿಶ್ಲೇಷಣೆಯ ಪ್ರಕಾರ, 6 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 19 ಮಂದಿ ಪ್ರಥಮ ದರ್ಜೆಯಲ್ಲಿ ಮತ್ತು 6 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಈ ಶೇಕಡಾ 100 ಫಲಿತಾಂಶವು ಸ್ಥಳೀಯ ಶಿಕ್ಷಣ ಕ್ಷೇತ್ರದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರ ಸಮರ್ಪಿತ ಬೋಧನೆ, ಪೋಷಕರ ಬೆಂಬಲ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಕಾರಣ ಎಂದು ಶಾಲಾ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

ಅದ್ವಿತಿಯ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೂ ಪೋಸ್ಟ್ ಮ್ಯಾನ್ ಮೀಡಿಯಾ ಹೌಸ್ ವತಿಯಿಂದ ಶುಭಾಶಯಗಳು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.