A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation.
ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೂಗೂಡ್ತಿ ನಿವಾಸಿ ಇಬ್ರಾಹಿಂ (69) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ.
ಇವರು ರಿಪ್ಪನ್ ಪೇಟೆಯಿಂದ ಮೂಗೂಡ್ತಿಗೆ ಬಸ್ನಲ್ಲಿ ಪ್ರಯಾಣಿಸಿ, ಬಸ್ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಇಬ್ರಾಹಿಂ ಅವರು ಬಸ್ನಿಂದ ಇಳಿದು ರಸ್ತೆ ದಾಟಲು ಮುಂದಾಗುತ್ತಿದ್ದಾಗ, ವೇಗವಾಗಿ ಬಂದ ಡಸ್ಟರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್