RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು
A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment.
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ವೇಳೆಯಲ್ಲಿ ಕಂಬಂದಿದ ಕೆಳಗೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಮೂಲದ ವಿಜಯ್ (30) ಯುವಕ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ನಿರ್ವಹಿಸುತಿದ್ದ ವೇಳೆಯಲ್ಲಿ ಕಾರ್ಮಿಕನೊಬ್ಬ ಲೈಟ್ ಕಂಬವೇರಿದ್ದು ಈ ಸಂಧರ್ಭದಲ್ಲಿ ವಿದ್ಯುತ್ ಕಂಬ ಏಕಾಏಕಿ ತುಂಡಾದ ಹಿನ್ನೆಲೆಯಲ್ಲಿ ಕಾರ್ಮಿಕ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು .
ಕೂಡಲೇ ಆತನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು.ಆದರೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…