ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ
A hotel worker from Bihar was found dead inside a car in Sagara, Shivamogga district. Police suspect a financial dispute led to the murder, and the hotel owner has been taken into custody.
ಸಾಗರ: ಹೊಟೆಲ್ ಕಾರ್ಮಿಕನೊಬ್ಬನ ಹತ್ಯೆ ಪ್ರಕರಣವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಎಸ್‌ಪಿ ಬಿ. ನಿಖಿಲ್ ತಿಳಿಸಿದ್ದಾರೆ.
ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಟಿಂಕು ಶರ್ಮಾ (30) ಗುರುವಾರ ಬೆಳಗ್ಗೆ ಹೊಂಡಾ ಸಿಟಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾನೆ.
ಈ ಸಂಬಂಧ ಕೆಫೆ ಮಾಲಿಕ ಇಮ್ರಾನ್ (30) ಅವರನ್ನು ಆರೋಪಿಯಾಗಿ ಗುರುತಿಸಲಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಟಿಂಕು ಶರ್ಮಾ ಮತ್ತು ಮಾಲಿಕ ಇಮ್ರಾನ್ ನಡುವೆ ಹಣಕಾಸಿನ ವಿಚಾರವಾಗಿ ಬುಧವಾರ ರಾತ್ರಿ ಜಗಳ ನಡೆದಿತ್ತು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಕೂಡ ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಈ ವೇಳೆ ಇಮ್ರಾನ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಎಸ್‌ಪಿ ನಿಖಿಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…