ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College.

ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್, ಕಾಲೇಜು ಸಮೀಪದ ಹಂಪ್ ಬಳಿ ತಲುಪಿದಾಗ ಅಪಘಾತ ಸಂಭವಿಸಿದೆ. ಬಸ್ಸಿನ ಮುಂದೆ ಸಾಗುತ್ತಿದ್ದ ಬೈಕ್ ಸವಾರ ಹಠಾತ್ತಾಗಿ ದಿಕ್ಕು ಬದಲಾಯಿಸಿದ ಹಿನ್ನೆಲೆಯಲ್ಲಿ, ಅವನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ತಕ್ಷಣ ದಿಕ್ಕು ಬದಲಾಯಿಸಿದ್ದಾನೆ.

ಆದರೆ ಪರಿಸ್ಥಿತಿ ಏಕಾಏಕಿ ಬದಲಾಗುತ್ತಿದ್ದಂತೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆ ಕಂಡ ಸ್ಥಳೀಯರು ಹಾಗೂ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿಕಾರಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

16 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

18 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago