ಸಿದ್ದಗಂಗಾ ಶ್ರೀಗಳ ಜಯಂತಿ: ವಿವಿಧ ಸಂಘಟನೆಗಳಿಂದ ಭಕ್ತಿ ಸಮರ್ಪಣೆ

The 119th birth anniversary of Sri Shivakumara Swamiji was celebrated in Rippon Pete with participation from various organizations, highlighting his immense contributions to education, social service, and the philosophy of Trivida Dasoha.

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸಮಾಜಕ್ಕೆ ಸನ್ಮಾರ್ಗ ತೋರಿದ ಮಹಾಪುರುಷರು. ಬಡವರ ಪಾಲಿಗೆ ಅನ್ನದಾತರಾಗಿ, ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದಾತರಾಗಿ ಸಮಾಜಕ್ಕೆ ಉತ್ತಮ ಮಾರ್ಗ ತೋರಿದರು’ ಎಂದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ಬಣ್ಣಿಸಿದರು.

ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು , ಹಿಂದೂಪರ ಸಂಘಟನೆಗಳು , ರೋಟರಿ ಕ್ಲಬ್ ಹಾಗೂ ಜುಮ್ಮಾ ಮಸೀದಿ ವತಿಯಿಂದ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ತ್ರಿವಿಧ ದಾಸೋಹ ತತ್ವವನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಸ್ವಾಮೀಜಿ ಅನ್ನ, ಅಕ್ಷರ ಹಾಗೂ ಭಕ್ತಿ ದಾಸೋಹವನ್ನು ಶಿರಸಾವಹಿಸಿ ಪಾಲಿಸಿದರು. ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದುದು. ಅವರ ಕೀರ್ತಿ ಕೇವಲ ರಾಜ್ಯಕ್ಕಷ್ಟೇ ಅಲ್ಲದೆ ಇಡೀ ದೇಶಕ್ಕೆ ಪಸರಿಸಿದೆ. ಅಂತಹವರ ಜನ್ಮದಿನವನ್ನು ನಾವೆಲ್ಲರೂ  ಆಚರಿಸುತ್ತಿರುವುದು ಪುಣ್ಯದ ಕೆಲಸ. ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕು’ ಎಂದರು.

ಮುಖಂಡರಾದ ಎಂ ಬಿ ಮಂಜುನಾಥ್ ಮಾತನಾಡಿ ‘ತಮ್ಮ ಮಠದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಅನ್ನವನ್ನು ಕೊಟ್ಟ ಶಿವಕುಮಾರ ಶ್ರೀಗಳು, ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಜ್ಞಾನದ ಬೆಳಕಾಗಿದ್ದಾರೆ. ಮಠದಲ್ಲಿ ಓದಿದವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕೀರ್ತಿ ತಂದಿದ್ದಾರೆ’ ಎಂದು ಹೇಳಿದರು.

ಪ್ರಮುಖರಾದ ಸದಾನಂದ್ ಮಾತನಾಡಿ ‘ಸ್ವಾಮೀಜಿ ಅವರು ನಮ್ಮಿಂದ ದೈಹಿಕವಾಗಿ ಮಾತ್ರ ದೂರವಾಗಿದ್ದಾರೆ. ಅವರ ತತ್ವಾದರ್ಶಗಳು ನಮ್ಮನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಿವೆ. ಅವರ ಆದರ್ಶ ಮತ್ತು ಸಂದೇಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು’ ಎಂದರು.

ಗಣ್ಯರು ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಪ್ರಮುಖರಾದ ಸುರೇಶ್ ಸಿಂಗ್ ,ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ ಬ್ಯಾರಿ ,ಪ್ರಮುಖರಾದ ನಾಗರಾಜ್ ಗೌಡ , ರಾಮಚಂದ್ರ ಬಳೆಗಾರ್ , ಪದ್ಮಾ ಸುರೇಶ್ , ಶೀಲಾ ಆರ್ ಡಿ , ಲೀಲಾ ಆರ್ ಶಂಕರ್ ,ರಾಮಚಂದ್ರ ಕೆರೆಹಳ್ಳಿ , ಮುರುಳಿ ಕೆರೆಹಳ್ಳಿ , ರವೀಂದ್ರ ಬಲ್ಲಾಳ್ ,ಯೋಗೇಂದ್ರಪ್ಪ ಗೌಡ , ಈಶ್ವರಪ್ಪ ಗೌಡ , ಮೈದೀನ್ ,ನವೀನ್ ಹಾಗೂ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

15 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

15 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

19 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

21 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago