A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case.
ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಆರ್.ಎಸ್. ಪರಮೇಶ್ವರಪ್ಪ ಶಿಕ್ಷೆಗೆ ಗುರಿಯಾದ ಅಧಿಕಾರಿ.
ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ಕೊಳವೆ ಬಾವಿ ಕೊರೆಸಿಕೊಡಲು ಫಲಾನುಭವಿಯಿಂದ ₹10,000 ಲಂಚ ಸ್ವೀಕರಿಸುವ ವೇಳೆ 13-07-2017ರಂದು ತಮ್ಮ ಕಚೇರಿಯಲ್ಲೇ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದರು.
ಸಾಗರ ತಾಲೂಕು ಹೊಸಗುಂದ ನಿವಾಸಿ ಹೆಚ್.ಎಸ್. ಜನಾರ್ಧನ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿಎಸ್‌ಪಿ ಎ. ಚಂದ್ರಪ್ಪ ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಏಪ್ರಿಲ್ 2ರಂದು ತೀರ್ಪು ನೀಡಿದೆ.
ಲೋಕಾಯುಕ್ತ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ. ಸುಂದರ್‌ರಾಜ್ ವಾದ ಮಂಡಿಸಿದ್ದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…