ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ
Job fair to be held in Shivamogga on April 28 with direct interviews by multiple companies. Candidates from SSLC to degree level can attend.
ಶಿವಮೊಗ್ಗ, ಏಪ್ರಿಲ್ 24: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಆದಿಶಕ್ತಿ ಕಾರ್ಸ್ ಪ್ರೈವೇಟ್ ಲಿಮಿಟೆಡ್, ನೆಕ್ಸ್ಚೆರ್ ಬಿಸಿನೆಸ್ ಸೆಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಕರಾವಳಿ ಟೀಚರ್ಸ್, ಸ್ವಮಾನ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಲ್ & ಟಿ ಫೈನಾನ್ಸ್ ಸಂಸ್ಥೆಗಳು ಭಾಗವಹಿಸಲಿವೆ. ಈ ಸಂಸ್ಥೆಗಳು ತಮ್ಮಲ್ಲಿರುವ ವಿವಿಧ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಕರೆತರುವಂತೆ ಸೂಚಿಸಲಾಗಿದೆ. ಮೇಳಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಕಚೇರಿಯನ್ನು ನೇರವಾಗಿ ಭೇಟಿ ಮಾಡಬಹುದು ಅಥವಾ ಮೊಬೈಲ್ ಸಂಖ್ಯೆ 9380663606 / 9108235132 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…