Headlines

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ

A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation.

ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ವಿವರ:

ದೂರುದಾರರಿಗೆ ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಿ, ‘ಪ್ರೊಸ್ಟಾಕ್’ ಎಂಬ ಟ್ರೇಡಿಂಗ್ ಕಂಪನಿಯ ಮೊಬೈಲ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿದ್ದಾರೆ. ಆರೋಪಿಗಳ ಮಾತುಗಳನ್ನು ನಂಬಿದ ಸಂತ್ರಸ್ತರು, ಅವರ ಸೂಚನೆಯಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹53,10,000 ಹಣ ವರ್ಗಾವಣೆ ಮಾಡಿದ್ದಾರೆ.

ನಂತರ ಹೂಡಿಕೆ ಮಾಡಿದ ಮೊತ್ತ ಹಾಗೂ ಲಾಭವನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಆರೋಪಿಗಳು “ಇನ್ನೂ ಎರಡು-ಮೂರು ದಿನಗಳಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ” ಎಂದು ಹೇಳಿ ಕಾಲಹರಣ ಮಾಡಿದ್ದಾರೆ. ಕೆಲವು ದಿನಗಳ ಬಳಿಕ ‘ಪ್ರೊಸ್ಟಾಕ್’ ಆ್ಯಪ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ್ದು, ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗದೆ ವಂಚನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಸಂತ್ರಸ್ತರು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

About The Author

Exit mobile version