ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ
Shivamogga traffic police register a case against two youths for performing dangerous wheeling on city roads and posting the video on social media.
ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ ಶಿವಮೊಗ್ಗದ ವಿಮಾನ ನಿಲ್ದಾಣ ರಸ್ತೆಯ ಪುಟ್ಟಪ್ಪ ಕ್ಯಾಂಪ್ ಬಳಿ ನಡೆದಿದ್ದು, ಯುವಕರು ತಮ್ಮ ಮೊಪೆಡ್ ವಾಹನದಲ್ಲಿ ವೀಲಿಂಗ್ ನಡೆಸಿ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತಂದಿದ್ದಾರೆ. ಈ ಸಾಹಸವನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಸಂಚಾರಿ ಪೊಲೀಸರ ಗಮನಕ್ಕೆ ಬಂದಿದ್ದು, ಬೈಕ್‌ನ ನಂಬರ್ ಪ್ಲೇಟ್ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ನಂತರ ಇಬ್ಬರ ಮೇಲೂ ಎಫ್‌ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಸಾರ್ವಜನಿಕ ರಸ್ತೆಯಲ್ಲಿ ಇಂತಹ ಅಪಾಯಕಾರಿ ಕೃತ್ಯಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…