ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ
An inter-district thief was arrested in Shivamogga for stealing gold, cash, and a mobile phone by entering a house through a window while residents were asleep.
ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ ಕುಟುಂಬದವರು ಕೊಠಡಿಯಲ್ಲಿ ನಿದ್ರಿಸುತ್ತಿದ್ದ ವೇಳೆ ಈ ಕಳ್ಳತನ ನಡೆದಿದೆ.
ಆರೋಪಿಯು ಬಾಗಿಲಿನ ಪಕ್ಕದಲ್ಲಿದ್ದ ಕಿಟಕಿಯನ್ನು ತೆರೆದು, ಅದರ ಮೂಲಕ ಕೈ ಹಾಕಿ ಬಾಗಿಲಿನ ಲಾಕ್ ತೆಗೆದು ಒಳನುಗ್ಗಿದ್ದಾನೆ. ಬಳಿಕ ಮನೆಯವರು ಮಲಗಿದ್ದ ಕೊಠಡಿಯ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ, ಮನೆಯಲ್ಲಿ ಇದ್ದ ಚಿನ್ನಾಭರಣ, ನಗದು ಹಾಗೂ ಮೊಬೈಲ್‌ಗಳನ್ನು ಕಳವು ಮಾಡಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಹಾಗೂ ಎಎಸ್ಪಿ ಎ.ಜಿ. ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಮತ್ತು ಪಿಎಸ್ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಚಾಂದ್ ಪೀರ್ @ ಮೊಹಮದ್ ಯೂನಸ್ (31) ಎಂಬಾತನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…