ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ

A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation.

ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಪ್ರಭು ಮೇಸ್ತ್ರಿ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೃತರನ್ನು ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಎಂದು ಗುರುತಿಸಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಜುಳಾ ಅವರು 2024ರಲ್ಲಿ ಪ್ರಭು ಮೇಸ್ತ್ರಿ ಅವರನ್ನು ವಿವಾಹವಾಗಿದ್ದು, ಬಳಿಕ ಸೊರಬ ಪಟ್ಟಣದ ಕಾನುಕೇರಿಯಲ್ಲಿ ವಾಸಿಸುತ್ತಿದ್ದರು. ಪ್ರಭು ಮೇಸ್ತ್ರಿ ಹಾರ್ಡ್‌ವೇರ್ ಅಂಗಡಿ ನಡೆಸುವುದರ ಜೊತೆಗೆ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.


ಮೃತೆಯ ತಾಯಿ ನೀಡಿದ ದೂರಿನ ಪ್ರಕಾರ, ಪ್ರಭು ಮೇಸ್ತ್ರಿಗೆ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧವಿದ್ದು, ಈ ವಿಚಾರವಾಗಿ ಕುಟುಂಬದವರು ಹಾಗೂ ಹಿರಿಯರು ರಾಜಿ ಪಂಚಾಯಿತಿ ನಡೆಸಿದ್ದರು. ಆದರೂ ಆ ಸಂಬಂಧವನ್ನು ಬಿಡದೆ, ಪತ್ನಿಗೆ ಹಿಂಸೆ ನೀಡುತ್ತಿದ್ದರೆಂದು ಆರೋಪಿಸಲಾಗಿದೆ. ಇದೇ ಕಾರಣದಿಂದ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಮಾಹಿತಿ ನೀಡಿದ್ದು, ಮೃತೆಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿ ಪ್ರಭು ಮೇಸ್ತ್ರಿ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.

ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

4 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

6 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

14 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

14 hours ago