ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ

— 14 ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ | ಬಿಇಒ ಗಣೇಶ್ ಹಾಗೂ ಶಿಕ್ಷಕರ ಶ್ರಮಕ್ಕೆ ಒಲಿದ ಯಶಸ್ಸು

SSLC Result 2025-26: The ತಾಲೂಕ reports an impressive 99% pass percentage with 806 students passing out of 814. Several schools achieved 100% results, highlighting strong academic performance.

​ಹೊಸನಗರ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳು ಶೇ. 99ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ವಲಯದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪರಿಶ್ರಮಕ್ಕೆ ಈ ಬಾರಿಯ ಫಲಿತಾಂಶ ಕನ್ನಡಿಯಾಗಿದೆ.

​ತಾಲೂಕಿನ ಒಟ್ಟು 19 ಸರ್ಕಾರಿ ಪ್ರೌಢಶಾಲೆಗಳಿಂದ 814 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಈ ಪೈಕಿ ಬರೋಬ್ಬರಿ 806 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಸಾಧನೆ ಮೆರೆದಿದ್ದು, ಕೇವಲ 8 ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣರಾಗಿದ್ದಾರೆ.

ಶತಪ್ರತಿಶತ ಸಾಧನೆ ಮೆರೆದ ಶಾಲೆಗಳು:

ತಾಲೂಕಿನ ಬಹುತೇಕ ಶಾಲೆಗಳು ಶೇ. 100ರಷ್ಟು ಫಲಿತಾಂಶ ದಾಖಲಿಸಿರುವುದು ವಿಶೇಷ. ಜಯನಗರ, ಬೆಳ್ಳೂರು, ಹೊಸನಾಡು, ಸೊನಲೆ, ಕಾರಗಣಗಿರು, ನಗರ, ಹೆದ್ದಾರಿಪುರ, ಕಾನುಗೋಡು, ಮಸಗಲ್ಲಿ, ಕೋಡೂರು, ನಿಟ್ಟೂರು, ಸಂಪೆಕಟ್ಟೆ, ಹೊಸನಗರ ಹಾಗೂ ಚಿಕ್ಕಜೇನಿ ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಪಡೆದು ಬೀಗಿವೆ.

​ಉಳಿದಂತೆ ಮಾರುತಿಪುರ (ಶೇ. 99), ರಿಪ್ಪನ್‌ಪೇಟೆ (ಶೇ. 98), ಅಮೃತ-ಗರ್ತಿಕೆರೆ (ಶೇ. 97.14), ಯಡೂರು (ಶೇ. 97) ಹಾಗೂ ಅರಸಾಳು (ಶೇ. 92) ಶಾಲೆಗಳು ಕೂಡ ಅತ್ಯುತ್ತಮ ಪ್ರಗತಿ ಸಾಧಿಸಿವೆ.

ಸಾಧನೆಗೆ ಪ್ರಶಂಸೆಯ ಮಹಾಪೂರ:

ರಿಪ್ಪನ್‌ಪೇಟೆ ಹಾಗೂ ಹೊಸನಗರ ಸಮೂಹ (ಕ್ಲಸ್ಟರ್) ಮಟ್ಟದಲ್ಲಿ ಈ ಅತ್ಯುತ್ತಮ ಶೈಕ್ಷಣಿಕ ಪ್ರಗತಿ ಕಂಡುಬಂದಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಗಣೇಶ್ ,ಶಿಕ್ಷಣ ಸಂಯೋಜನಾಧಿಕಾರಿಗಳಾದ ಕರಿಬಸಪ್ಪ , ಸುಮಾರಾಣಿ ಹಾಗೂ ರಾಜೇಂದ್ರ BRP ಅವಿರತ ಶ್ರಮಕ್ಕೆ ಈ ಮೂಲಕ ಯಶಸ್ಸು ಲಭಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶದ ನಿರೀಕ್ಷೆ ವ್ಯಕ್ತವಾಗಿದೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಈ ಅಮೋಘ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಿಕ್ಷಕ ಮತ್ತು ಪೋಷಕ ವೃಂದಕ್ಕೆ ‘ಪೋಸ್ಟ್ ಮ್ಯಾನ್ ನ್ಯೂಸ್’ ಬಳಗದ ವತಿಯಿಂದ ಹಾರ್ದಿಕ ಅಭಿನಂದನೆಗಳು ಸಲ್ಲಿಕೆಯಾಗಿವೆ.

ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿದ್ಯಾರ್ಥಿಗಳ ಆಸಕ್ತಿ ಶಿಕ್ಷಕರುಗಳ ಅವಿರತ ಪರಿಶ್ರಮ , ಪೋಷಕರ ಹಾಗೂ ಶಾಲಾಭಿವೃದ್ದಿ ಸಮಿತಿಯವರ ಸಹಕಾರವೇ ಇಂತಹ ಐತಿಹಾಸಿಕ ಫಲಿತಾಂಶಕ್ಕೆ ಕಾರಣವಾಗಿದ್ದೂ ಈ ಸಂಧರ್ಭದಲ್ಲಿ ಆವರೆಲ್ಲಾಗಿಗೂ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

18 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

18 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

19 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago