SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

Vatsalya International School in Ayanur, Shivamogga records 100% SSLC results for 2025-26, with 34 students passing and top scores led by Deekshit G.

ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಈ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ಮೇಲುಗೈಯನ್ನು ಸಾಬೀತುಪಡಿಸಿದೆ.

ಈ ಬಾರಿ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 34 ವಿದ್ಯಾರ್ಥಿಗಳೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 19 ಪ್ರಥಮ‌ ಶ್ರೇಣಿ , ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾರೆ.

ವೈಯಕ್ತಿಕ ಸಾಧನೆಯಲ್ಲಿ, ದೀಕ್ಷಿತ್ ಜಿ 625ರಲ್ಲಿ 607 (97.12%) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಜೀವನ್ ಪಾಟೀಲ್ 606 (96.96%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿದ್ದು, ಭುವನ್ 578 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆ ಶಾಲೆಯ ಶಿಕ್ಷಣ ಮಟ್ಟವನ್ನು ಪ್ರತಿಬಿಂಬಿಸುತ್ತದೆ.

ಶಾಲೆಯ ಈ ನಿರಂತರ ಯಶಸ್ಸಿಗೆ ಸಂಸ್ಥೆಯ ಸ್ಥಾಪಕರಾದ ಶೈಲಜಾ ಹುಂಚದಕಟ್ಟೆ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದ ಪರಿಶ್ರಮ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಪೋಷಕರ ಸಹಕಾರವೂ ಈ ಸಾಧನೆಗೆ ಬೆನ್ನೆಲುಬಾಗಿದೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆಗಳನ್ನು ಸಲ್ಲಿಸಿ, ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲು ಶುಭಹಾರೈಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

19 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

19 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

20 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago