Headlines

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ

GridArt 20260419

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ

A head-on collision between two cars at Vinayaka Circle in Ripponpet injured four people, including two children. The injured were shifted to Shivamogga for further treatment. Police have registered a case and are investigating.

ರಿಪ್ಪನ್ ಪೇಟೆ: ಪಟ್ಟಣದ ಪ್ರಮುಖ ಸಂಚಾರ ವೃತ್ತವಾಗಿರುವ ವಿನಾಯಕ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳನ್ನು ಒಳಗೊಂಡಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಸಾಗರ ಮಾರ್ಗದಿಂದ ಕೊಪ್ಪದತ್ತ ಪ್ರಯಾಣಿಸುತ್ತಿದ್ದ ಹ್ಯೂಂಡೈ ಐ20 ಕಾರು ಹಾಗೂ ಹೊಸನಗರ ಮಾರ್ಗದಿಂದ ಶಿರಸಿಯತ್ತ ತೆರಳುತ್ತಿದ್ದ ಮಾರುತಿ ಅಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಹಾನಿಗೊಳಗಾಗಿದ್ದು, ಘಟನಾ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನಜ್ಜುಗುಜ್ಜಾಗಿದೆ.

ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತಕ್ಕೀಡಾದ ಮಾರುತಿ ಅಲ್ಟೋ ಕಾರು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ನಿವಾಸಿಗಳದ್ದಾಗಿದ್ದು, ಐ20 ಕಾರು ಶಿರಸಿ ಮೂಲದವರದ್ದು ಎನ್ನಲಾಗಿದೆ. ವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.