ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು
A contract worker died in a tragic accident at VISL Bhadravathi after a heavy iron billet fell due to a crane cable failure. The victim succumbed to severe injuries before reaching the hospital.
ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ Visvesvaraya Iron and Steel Limited (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ದಾರುಣ ದುರಂತದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಭದ್ರಾವತಿಯ ನಿವಾಸಿ ವಿನೋದ್ ಕುಮಾರ್ ಎಸ್ (36) ಎಂದು ಗುರುತಿಸಲಾಗಿದೆ.
ಕಳೆದ 15 ವರ್ಷಗಳಿಂದ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಅವರು, ಘಟನೆಯ ದಿನ ವಿಐಎಸ್‌ಎಲ್ ಆವರಣದಲ್ಲಿ ಕಬ್ಬಿಣದ ಬಿಲ್ಲೆಟ್‌ಗಳನ್ನು ಅನ್‌ಲೋಡ್ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಸಿಸ್ಟರ್ ಪ್ಲಾಂಟ್‌ನಿಂದ ತರಲಾಗಿದ್ದ ಭಾರೀ ತೂಕದ ಬಿಲ್ಲೆಟ್‌ಗಳನ್ನು ಕ್ರೇನ್ ಮೂಲಕ ಇಳಿಸುವ ಸಂದರ್ಭದಲ್ಲಿ ಏಕಾಏಕಿ ಕ್ರೇನ್‌ನ ವೈರ್ ರೋಪ್ ತುಂಡಾಗಿದೆ. ಪರಿಣಾಮವಾಗಿ ಮೇಲಿದ್ದ ಬಿಲ್ಲೆಟ್ ಕೆಳಗೆ ಕೆಲಸ ಮಾಡುತ್ತಿದ್ದ ವಿನೋದ್ ಕುಮಾರ್ ಅವರ ಮೇಲೆ ಬಿದ್ದು, ಎಡಗಾಲು ಹಾಗೂ ಸೊಂಟ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ತೀವ್ರ ರಕ್ತಸ್ರಾವ ಉಂಟಾಗಿ ಅವರ ಸ್ಥಿತಿ ಗಂಭೀರಗೊಂಡಿತು.
ಗಾಯಾಳುವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅತಿಯಾದ ರಕ್ತಸ್ರಾವದಿಂದ ಅವರು ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಮೃತದೇಹವನ್ನು ಶವಪರೀಕ್ಷೆಗಾಗಿ McGann Hospital ಗೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…