ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ

A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure public safety.

ರಿಪ್ಪನ್ ಪೇಟೆ: ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕಲ್ಲುಹಳ್ಳ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಒಂಟಿ ಕಾಡಾನೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ಅರಣ್ಯ ಪ್ರದೇಶದತ್ತ ಓಡಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಾರ್ವಜನಿಕರಿಗೆ ಹಾಗೂ ತೋಟ-ಬೆಳೆಗಳಿಗೆ ಯಾವುದೇ ಹಾನಿ ಆಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅರಣ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನೂ ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 5:30ರ ವೇಳೆಗೆ ಕಲ್ಲುಹಳ್ಳದ ನ್ಯಾಯಬೆಲೆ ಅಂಗಡಿ ಸಮೀಪ ಕಾಣಿಸಿಕೊಂಡ ಆನೆ, ಬಳಿಕ ಮನೆಗಳ ಹತ್ತಿರದಿಂದ ಸಾಗುತ್ತ ತೋಟ ಪ್ರದೇಶಕ್ಕೆ ನುಗ್ಗಿದೆ. ನಂತರ ಹಾರೋಹಿತ್ಲು ಗ್ರಾಮದ ದಿಕ್ಕಿನಲ್ಲಿ ಸಂಚರಿಸಿದೆ ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಆನೆಗಳ ಸಂಚಾರ ಸಾಮಾನ್ಯವಾಗಿದ್ದರೂ, ಮನೆಗಳು ಹಾಗೂ ತೋಟಗಳ ಅತಿ ಸಮೀಪದಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಆನೆ ಕಂಡುಬಂದ ಪ್ರದೇಶಗಳಿಗೆ ಅನಾವಶ್ಯಕವಾಗಿ ತೆರಳದೇ ಎಚ್ಚರಿಕೆಯಿಂದ ಇರಲು ಮನವಿ ಮಾಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

4 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

4 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

4 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

10 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

10 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

14 hours ago