ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely.

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡ ದುರ್ಘಟನೆ ನಡೆದಿದೆ.

ಮೃತರನ್ನು ಕೃಷ್ಣ ನಾಯಕ್ (52), ಅನಂತಕಲಾ ನಾಯಕ್ (45), ಶರಣಪ್ಪ (36), ನಿಸರ್ಗ ಶರಣಪ್ಪ (30), ಅವರ ಪುತ್ರ ಸಿದ್ಧಾರ್ಥ (3) ಹಾಗೂ ಶಶಿಕಲಾ (30) ಎಂದು ಗುರುತಿಸಲಾಗಿದೆ.

ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶರಣಪ್ಪ ದಂಪತಿಯ ಪುತ್ರಿಯರಾದ ಅದ್ವಿಕಾ (5) ಮತ್ತು ಶ್ರೀನಿಧಿ (1.5) ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಪ್ರಾಥಮಿಕ ತನಿಖೆ ಮತ್ತು ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಕಾರಿನ ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿಗೆ ಬೆಂಕಿ ತಗುಲಿ, ಕ್ಷಣಾರ್ಧದಲ್ಲೇ ಅಗ್ನಿಗಾಹುತಿಯಾಗಿದೆ.

ಯಾದಗಿರಿಯಿಂದ ರಾಯಚೂರು ಕಡೆ ಸಾಗುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 8 ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಸುಮಾರು 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾಹಿತಿ ನೀಡಿದ್ದು, ಮೃತರು ಮತ್ತು ಗಾಯಾಳುಗಳು ಪರಸ್ಪರ ಸಂಬಂಧಿಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

55 minutes ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

1 hour ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago