ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್

Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey.

​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ ಸಾಧನೆಯನ್ನಾದರೂ ಮಾಡಬಲ್ಲರು ಎಂಬುದನ್ನು ಮಲೆನಾಡಿನ ಹೊಸನಗರ ತಾಲೂಕಿನ ಯುವತಿಯೊಬ್ಬರು ಸಾಬೀತುಪಡಿಸಿದ್ದಾರೆ.

ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಅದ್ಧೂರಿ ಘಟಿಕೋತ್ಸವದಲ್ಲಿ ಕುಮಾರಿ ಐಶ್ವರ್ಯ ಇ. ಎಂ ಅವರು ಸ್ನಾತಕೋತ್ತರ ಪದವಿ ಎಂ.ಎಸ್ಸಿ ಸಸ್ಯಶಾಸ್ತ್ರ (ಬಾಟನಿ) ವಿಭಾಗದಲ್ಲಿ ಇಡೀ ವಿಶ್ವವಿದ್ಯಾಲಯಕ್ಕೇ ಪ್ರಥಮ ರ‍್ಯಾಂಕ್ ಗಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬರೋಬ್ಬರಿ 4 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡು ತಮ್ಮ ತಾಲೂಕಿಗೆ ಕೀರ್ತಿ ಪತಾಕೆ ಹಾರಿಸಿದ್ದಾರೆ.

​ಹೊಸನಗರ ತಾಲ್ಲೂಕಿನ ಬಿಲ್ಲೇಶ್ವರ ಸಮೀಪದ ಕುಗ್ರಾಮವಾದ ಈಚಲಕೊಪ್ಪದ ನಿವಾಸಿಗಳಾದ ಶಶಿಕಲಾ ಹಾಗೂ ಮಲ್ಲಪ್ಪ ದಂಪತಿಗಳ ಸುಪುತ್ರಿಯಾಗಿರುವ ಐಶ್ವರ್ಯ ಅವರ ಈ ಸಾಧನೆ ಇಡೀ ಊರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದೆ. ಗ್ರಾಮೀಣ ಹಿನ್ನೆಲೆಯಿಂದ ಬಂದರೂ, ಭೌಗೋಳಿಕ ಮಿತಿಗಳೆಲ್ಲವನ್ನೂ ಮೀರಿ ನಿಂತ ಐಶ್ವರ್ಯ, ತಮ್ಮ ನಿರಂತರ ಪರಿಶ್ರಮ, ಗುರಿಯೆಡೆಗಿನ ಅಚಲ ಶ್ರದ್ಧೆ ಹಾಗೂ ಕಠಿಣ ಅಭ್ಯಾಸದಿಂದ ಈ ಉನ್ನತ ಮಟ್ಟವನ್ನು ತಲುಪಿದ್ದಾರೆ. ಚಿನ್ನದ ಪದಕ ಕೊರಳಿಗೇರಿಸಿಕೊಂಡ ಮಗಳನ್ನು ಕಂಡು ಪೋಷಕರ ಕಣ್ಣಲ್ಲಿ ಆನಂದಭಾಷ್ಪ ಮೂಡಿತ್ತು.

​ಬಾಲ್ಯದಿಂದಲೇ ಓದಿನಲ್ಲಿ ಅತೀವ ಆಸಕ್ತಿ ಹೊಂದಿದ್ದ ಈ ಪ್ರತಿಭಾವಂತೆ, ತಮ್ಮ ಶೈಕ್ಷಣಿಕ ಹಾದಿಯಲ್ಲಿ ಸತತವಾಗಿ ಅತ್ಯುನ್ನತ ಶ್ರೇಣಿಯನ್ನೇ ಕಾಯ್ದುಕೊಂಡು ಬಂದಿದ್ದಾರೆ. ಇವರ ಪ್ರಾಥಮಿಕ ಶಿಕ್ಷಣವು ಕೋಣಂದೂರಿನ ನವಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ಬಳಿಕ ಕೋಣಂದೂರಿನ ಪ್ರಸಿದ್ಧ ಎನ್.ಹೆಚ್.ಎಸ್ (NHS) ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪೂರೈಸಿ, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರು. ತರುವಾಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮುಗಿಸಿ, ಉನ್ನತ ಶಿಕ್ಷಣದ ಕನಸಿನೊಂದಿಗೆ ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿನಲ್ಲಿ ಬಿಎಸ್ ಸಿ ಪದವಿ ಪಡೆದರು. ಪ್ರತಿಯೊಂದು ಹಂತದಲ್ಲಿಯೂ ತಮ್ಮ ಜ್ಞಾನದಾಹವನ್ನು ಹೆಚ್ಚಿಸಿಕೊಳ್ಳುತ್ತಾ ಬಂದ ಐಶ್ವರ್ಯ, ಇಂದು ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಬೆಳೆ ತೆಗೆದಿದ್ದಾರೆ.

​ಮಲೆನಾಡಿನ ಮಣ್ಣಿನ ಮಗಳ ಈ ಸುವರ್ಣ ಸಾಧನೆ ಈ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಚಿಲುಮೆಯಾಗಿದೆ. ಸಸ್ಯಶಾಸ್ತ್ರದಂತಹ ಕಠಿಣ ವಿಷಯದಲ್ಲಿ ಆಳವಾದ ಅಧ್ಯಯನ ನಡೆಸಿ, ವಿಶ್ವವಿದ್ಯಾಲಯದ ಮಟ್ಟದಲ್ಲಿ ಅಗ್ರಸ್ಥಾನಕ್ಕೇರಿರುವುದು ಸಾಮಾನ್ಯ ವಿಷಯವಲ್ಲ.

ಐಶ್ವರ್ಯ ರವರ ಈ ಅದ್ವಿತೀಯ ಹಾಗೂ ಹೆಮ್ಮೆಯ ಸಾಧನೆಗೆ ‘ಪೋಸ್ಟ್ ಮ್ಯಾನ್ ನ್ಯೂಸ್’ ಬಳಗವು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಮುಂದಿನ ದಿನಗಳಲ್ಲಿ ಇವರು ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆದು, ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಶುಭಕೋರುತ್ತದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago