ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers.

ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಜಾಮಿಯಾ ಮಸೀದಿ (ಕಳೂರು ಜುಮ್ಮಾ ಮಸೀದಿ) ಆವರಣದಲ್ಲಿ ಬಕ್ರೀದ್ ಪ್ರಯುಕ್ತ ವಿಶೇಷ ನಮಾಜ್ ನೆರವೇರಿಸಲಾಯಿತು. ಈ ವೇಳೆ ಖುತ್ಬಾ ನಂತರ ಉಪದೇಶ ನೀಡಿದ ಖತೀಬರಾದ ಜನಾಬ್ ಮುಹಮ್ಮದ್ ರಿಹಾನ್ ಅವರು, “ಪ್ರವಾದಿ ಇಬ್ರಾಹಿಂ ಅವರು ಅಲ್ಲಾಹುವಿನ ಆದೇಶದಂತೆ ತಮ್ಮ ಪುತ್ರ ಹಜರತ್ ಇಸ್ಮಾಯಿಲ್ ಅವರನ್ನು ಬಲಿ ನೀಡಲು ಸಿದ್ದರಾದ ತ್ಯಾಗಭಾವನೆ ಈ ಹಬ್ಬದ ಮೂಲ ಸಂದೇಶವಾಗಿದೆ” ಎಂದು ಹೇಳಿದರು.

ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಪರಸ್ಪರ ಸಹೋದರತ್ವ ಬೆಳೆಸುವುದು ಹಾಗೂ ಶಾಂತಿ-ಸೌಹಾರ್ದತೆಯನ್ನು ಕಾಪಾಡುವುದು ಬಕ್ರೀದ್ ಹಬ್ಬದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸೌದಿ ಅರೇಬಿಯಾದ ಮಕ್ಕಾದಲ್ಲಿ ನಡೆಯುವ ಪವಿತ್ರ ಹಜ್ ಯಾತ್ರೆಯ ಸಂದರ್ಭದಲ್ಲೇ ಈ ಹಬ್ಬ ಆಚರಿಸಲಾಗುತ್ತಿದ್ದು, ಜೀವನದಲ್ಲಿ ಕನಿಷ್ಠ ಒಂದು ಬಾರಿ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಧರ್ಮ ತಿಳಿಸುತ್ತದೆ ಎಂದರು. ಹಜ್ ವಿಧಿವಿಧಾನಗಳ ಸಮಾಪ್ತಿಯೂ ಈ ಹಬ್ಬದೊಂದಿಗೆ ಸಂಬಂಧ ಹೊಂದಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಸುಖ-ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಜೊತೆಗೆ ಪವಿತ್ರ ಹಜ್ ಯಾತ್ರೆಗೆ ತೆರಳಿರುವ ಜಮಾತಿನ ಸದಸ್ಯರು ಹಾಗೂ ಎಲ್ಲಾ ಯಾತ್ರಿಕರ ಸುಖಕರ ವಾಪಸ್ಸಿಗಾಗಿ ವಿಶೇಷ ದುವಾ ಮಾಡಲಾಯಿತು.

ಪ್ರತಿ ವರ್ಷದಂತೆ ಹಳೆ ಸಾಗರ ರಸ್ತೆಯಲ್ಲಿ ಈದ್ ನಮಾಝ್ ಆಯೋಜನೆಗೆ ಸಿದ್ಧತೆ ಮಾಡಲಾಗಿದ್ದರೂ, ಮಳೆಯ ಕಾರಣದಿಂದ ಮಸೀದಿಯಲ್ಲೇ ನಮಾಜ್ ನೆರವೇರಿಸಲಾಯಿತು.

ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾತಿನ ಸದಸ್ಯರು, ಸಮುದಾಯದ ಮುಖಂಡರು, ಯುವಕರು ಹಾಗೂ ಮಕ್ಕಳು ಪರಸ್ಪರ ಆಲಿಂಗನ ಮಾಡಿಕೊಂಡು ಬಕ್ರೀದ್ ಶುಭಾಶಯ ವಿನಿಮಯ ಮಾಡಿಕೊಂಡರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

7 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

8 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

14 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago