ಹೊಸನಗರದ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ
A private bus traveling from Bengaluru to Kundapura overturned near Hosanagara on NH 766C after the driver lost control. Eleven passengers sustained minor injuries and were shifted to the government hospital for treatment.
ಹೊಸನಗರ, ಮೇ 8: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ 11 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ “ಸಾಗರ್” ಹೆಸರಿನ ಖಾಸಗಿ ಬಸ್ ಇಂದು ಬೆಳಿಗ್ಗೆ ಸುಮಾರು 5:15ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಮಗುಚಿಬಿದ್ದಿದೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಉಂಟಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯಲ್ಲಿ ಒಟ್ಟು 11 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ನೆರವಿಗೆ ಧಾವಿಸಿದರು. ಗಾಯಾಳುಗಳನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ಪಲ್ಟಿಯಾದ ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…