w
Headlines
Home » ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ

GridArt 20260527

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ

New Town police in Bhadravathi raided a house near Siddapura Bypass and uncovered an alleged prostitution racket. Four women were rescued while the accused remains absconding.

ಭದ್ರಾವತಿ: ನಗರದ ಸಿದ್ದಾಪುರ ಬೈಪಾಸ್ ಸಮೀಪದ ಪಿ.ಎಸ್ ಬಾರ್ ಹಿಂಭಾಗದಲ್ಲಿರುವ ಹಳೇ ಬಂಡಾರಹಳ್ಳಿಯ ತಗಡಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ್ಯೂಟೌನ್ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಿವಂಗತ ಪುಟ್ಟಮಾಯಮ್ಮ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದ ರಾಬರ್ಟ್ @ ರವಿ ಎಂಬಾತ ಹಣದ ಆಮಿಷವೊಡ್ಡಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎನ್ನಲಾಗಿದೆ.

ಪೊಲೀಸರು ದಾಳಿ ನಡೆಸಿದ ವೇಳೆ ಮನೆಯಲ್ಲಿ ನಾಲ್ವರು ಮಹಿಳೆಯರು ಪತ್ತೆಯಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ ಆರೋಪಿಯಾದ ರಾಬರ್ಟ್ @ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಸಬ್‌ಇನ್ಸ್‌ಪೆಕ್ಟರ್ ರಮೇಶ್ ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.