ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ
A 23-year-old youth died on the spot after a speeding Ford car crashed into a tree near Ranganathapura in Bhadravathi taluk. Another youth suffered a leg fracture and is undergoing treatment at Meggan Hospital in Shivamogga.
ಭದ್ರಾವತಿ: ತಾಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಜಂಕ್ಷನ್ ಕಡೆಯಿಂದ ಶಿವಮೊಗ್ಗದತ್ತ ಅತೀವೇಗದಲ್ಲಿ ಸಾಗುತ್ತಿದ್ದ ಫೋರ್ಡ್ ಕಾರು ರಂಗನಾಥಪುರ ಮತ್ತು ಲಕ್ಕಿನಕೊಪ್ಪ ನಡುವಿನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಎಂಜಿನ್ ಸೇರಿದಂತೆ ಹಲವು ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.
ಕಾರು ಚಲಾಯಿಸುತ್ತಿದ್ದ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ನಿವಾಸಿ ಫರ್ರಾನ್ (23) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಹಮ್ಮದ್ ರಯಾನ್ (19) ಅವರ ಕಾಲು ಮುರಿದು ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅತೀವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…