w
Headlines
Home » ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

GridArt 20260508

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh.

ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

2020ರ ಜನವರಿ 15ರಂದು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ನಿವಾಸಿ ಫ್ಲೋರಾ ನ್ಯಾನ್ಸಿ, ರಾಜಶೇಖರಯ್ಯ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ಸಂಬಂಧಕ್ಕೆ ತನ್ನ ಗಂಡ ಪ್ರಕಾಶ್ ಬಾಬು ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಆರೋಪಿತರು ಸಂಚು ರೂಪಿಸಿದ್ದರು.

ಪ್ರಕಾಶ್ ಬಾಬುವಿಗೆ ಮೊದಲು ಮತ್ತು ಬರುವ ಔಷಧಿ ನೀಡಿ, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಮಂಜುನಾಥ್ ಇ.ಓ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಬಳಿಕ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಾದ ಫ್ಲೋರಾ ನ್ಯಾನ್ಸಿ ಹಾಗೂ ರಾಜಶೇಖರಯ್ಯ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಇದೇ ವೇಳೆ ಆರೋಪಿತರಿಗೆ ಒಟ್ಟು ₹14 ಲಕ್ಷ ದಂಡ ವಿಧಿಸಲಾಗಿದ್ದು, ಮೃತನ ಕುಟುಂಬಕ್ಕೆ ಪರಿಹಾರವಾಗಿ ₹5 ಲಕ್ಷ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.