ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ
Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಸಂಭವಿಸಿದ ದುರಂತಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು.
ನೀರು ಪಾಲಾದವರು ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.
ಮೃತರನ್ನು ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಹಾಗೂ ಲಕ್ಷ್ಮೀ ಅಣ್ಣಪ್ಪ ನಾಯ್ಕ(44) ಎಂದು ಗುರುತಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ.
ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…