ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ

An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors

ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ ಸೆಳೆಯುತ್ತಿದೆ. ಗ್ರಾಮದ ಸುತ್ತಮುತ್ತ ನಡೆದ ಪರಿಶೋಧನೆಯಲ್ಲಿ ಐದು ಮಾಸ್ತಿಕಲ್ಲುಗಳು ಹಾಗೂ ಒಂದು ಅಪರೂಪದ ವೀರಗಲ್ಲು ಪತ್ತೆಯಾಗಿದ್ದು, ಈ ವೀರಗಲ್ಲು ಕ್ರಿ.ಶ. 1202ರ ಕಾಲಘಟ್ಟಕ್ಕೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಗ್ರಾಮಸ್ಥರು ಈ ವೀರಗಲ್ಲಿಗೆ ಗುಡಿ ನಿರ್ಮಿಸಿ ಪೂಜೆ ಸಲ್ಲಿಸುತ್ತಿದ್ದರೆಂದು ಹೇಳಲಾಗಿದೆ.

ಹತ್ತು ಸಾಲುಗಳ ಶಾಸನ ಹೊಂದಿರುವ ಈ ವೀರಗಲ್ಲು ಹೊಸಗುಂದದ ಬೀರರಸನ ಕಾಲಕ್ಕೆ ಸೇರಿದ್ದು, ಶಾಸನದಲ್ಲಿ ಬೀರರಸನನ್ನು “ಸತ್ಯ ರತ್ನಾಕರ”, “ಸರಣಾಗತ ವಜ್ರಪಂಜರ”, “ಪರನಾರಿ ಸಹೋದರ” ಮುಂತಾದ ಬಿರುದುಗಳಿಂದ ಕೊಂಡಾಡಲಾಗಿದೆ. ಇದರಿಂದ ಆ ಕಾಲದ ರಾಜಕೀಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ವ್ಯವಸ್ಥೆಯ ಕುರಿತು ಮಹತ್ವದ ಮಾಹಿತಿಗಳು ಬೆಳಕಿಗೆ ಬಂದಿವೆ.

ಸೈನ್ಯ ಎದುರಿಸಿ ವೀರಮರಣ

ಶಾಸನದ ಪ್ರಕಾರ, ಬೀರರಸನ ಸೈನ್ಯ ಸಾಗುತ್ತಿದ್ದ ಸಂದರ್ಭದಲ್ಲಿ ಸಾತಗೌಡನ ಪುತ್ರನು ಸೈನ್ಯವನ್ನು ಎದುರಿಸಿ ಯುದ್ಧದಲ್ಲಿ ವೀರಮರಣ ಹೊಂದಿದ್ದಾನೆ. ಆತನ ಸಾಹಸವನ್ನು ಸ್ಮರಿಸಲು ಲಕ್ಷೀತಾಯಿ ಬಿಲ್ಲಬ್ಬೆ ಗೌಡತಿ ಹಾಗೂ ಅಣ್ಣಬ್ಬೆ ಗೌಡತಿ ಎಂಬ ಮಹಿಳೆಯರು ಈ ವೀರಗಲ್ಲನ್ನು ಸ್ಥಾಪಿಸಿರುವುದು ಶಾಸನದಲ್ಲಿ ಉಲ್ಲೇಖವಾಗಿದೆ.

ವೀರನ ಸ್ಮರಣಾರ್ಥವಾಗಿ ವೀರಗಲ್ಲಿಗೆ ಪೂಜೆ ನಡೆಯುವಂತೆ ಉಂಬಳಿ ನೀಡಿದ ವಿಚಾರವೂ ಶಾಸನದಲ್ಲಿದೆ. ಜೊತೆಗೆ “ಸಾವಿರ ಖಂಡುಗ” ದಾನ ನೀಡಿದ ಉಲ್ಲೇಖವೂ ದೊರೆತಿದ್ದು, ಆ ಕಾಲದ ದಾನಧರ್ಮ ಹಾಗೂ ಆಚರಣೆಗಳ ಕುರಿತು ಅಪರೂಪದ ಮಾಹಿತಿ ಲಭ್ಯವಾಗಿದೆ.

ಗೂಳಿ-ಹಸುವಿನ ಮದುವೆ ಸಂಪ್ರದಾಯದ ದಾಖಲೆ

ಈ ಶಾಸನದ ಅತ್ಯಂತ ವಿಶೇಷ ಅಂಶವೆಂದರೆ “ಗೂಳಿ-ಕವಿಲೆಯ ಮದುವೆ” ಕುರಿತು ದೊರೆತಿರುವ ಉಲ್ಲೇಖವಾಗಿದೆ. ಯುದ್ಧದಲ್ಲಿ ಮೃತ ಪಟ್ಟ ವೀರನು ಅವಿವಾಹಿತನಾಗಿದ್ದರೆ, ಆತನ ಆತ್ಮಶಾಂತಿಗಾಗಿ ಗೂಳಿ ಮತ್ತು ಹಸುವಿನ ಮದುವೆ ಮಾಡುವ ಸಂಪ್ರದಾಯವಿದ್ದುದನ್ನು ಶಾಸನ ದಾಖಲಿಸಿದೆ.
ಇಂತಹ ಆಚರಣೆಗಳು ಆ ಕಾಲದ ಜನರ ನಂಬಿಕೆ, ಮರಣೋತ್ತರ ವಿಧಿ-ವಿಧಾನಗಳು ಹಾಗೂ ಸಾಮಾಜಿಕ ಬದುಕಿನ ಕುರಿತು ಅಮೂಲ್ಯ ಮಾಹಿತಿಯನ್ನು ನೀಡುತ್ತವೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಸಂಶೋಧಕರಿಂದ ಅಧ್ಯಯನ

ಈ ಅಪರೂಪದ ವೀರಗಲ್ಲಿನ ಅಧ್ಯಯನವನ್ನು ಶಾಸನ ತಜ್ಞ ರಮೇಶ್ ಹಿರೆಜಂಬೂರು ಅವರ ಮಾರ್ಗದರ್ಶನದಲ್ಲಿ ಆದಿತ್ಯ ನಂಜವಳ್ಳಿ ಹಾಗೂ ಗಣೇಶ್ ಕೆ.ಎನ್. ಕೋಣಂದೂರು ನಡೆಸಿದ್ದಾರೆ.

ಪರಿಶೋಧನಾ ಕಾರ್ಯದಲ್ಲಿ ಗ್ರಾಮದ ಲಕ್ಷ್ಮಣ, ಲಿಂಗರಾಜು, ರಾಜೇಶ್, ರವಿ, ರಾಘು, ಮೋಹನ್ ಕುಮಾರ್ ಜೀವನ್, ಮಹೇಶ್ ಸೋಮಶೇಖರ್, ರೇಣುಕಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಿದರಹಳ್ಳಿಯಲ್ಲಿ ಪತ್ತೆಯಾದ ಈ ವೀರಗಲ್ಲು ಕೇವಲ ಶಾಸನವಲ್ಲ; ಅದು ಕನ್ನಡ ನಾಡಿನ ಯುದ್ಧಸಾಹಸ, ಸಾಂಸ್ಕೃತಿಕ ನಂಬಿಕೆಗಳು ಮತ್ತು ದಾನಧರ್ಮದ ಪರಂಪರೆಯನ್ನು ಸಾರುವ ಅಮೂಲ್ಯ ಐತಿಹಾಸಿಕ ದಾಖಲೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

9 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

9 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

16 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago