ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ
Four members of the same family from Buddhanagar in Shivamogga have been missing since April 15. Doddapete police have appealed to the public to provide any information about the missing persons.
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಕಳೆದ ಏಪ್ರಿಲ್ 15ರಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕಾಣೆಯಾಗಿರುವವರಲ್ಲಿ ಮೊಹಮ್ಮದ್ ಇಕ್ಬಾಲ್ (62) ಅವರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು ಹಾಗೂ ಬಿಳಿ ಮೈಬಣ್ಣ ಹೊಂದಿದ್ದಾರೆ. ನಸ್ರತ್ ಬಾನು (54) ಅವರು 5.2 ಅಡಿ ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಸೀಳು ತುಟಿ ಹೊಂದಿದ್ದಾರೆ.
ಇನ್ನೂ ಮೊಹಮ್ಮದ್ ಫಾಜಿಲ್ (35) ಅವರು 5.6 ಅಡಿ ಎತ್ತರ, ತೆಳ್ಳನೆ ಮೈಕಟ್ಟು ಹಾಗೂ ಬಿಳಿ ಮೈಬಣ್ಣ ಹೊಂದಿದ್ದು, ಎದೆಯಲ್ಲಿ ಚರ್ಮಗಂಟು ಇರುವ ಗುರುತು ಇದೆ. ಮೊಹಮ್ಮದ್ ಆದಿಲ್ (32) ಅವರು 5.4 ಅಡಿ ಎತ್ತರ, ದಪ್ಪ ಮೈಕಟ್ಟು ಹಾಗೂ ಎಣ್ಣೆಗೆಂಪು ಮೈಬಣ್ಣ ಹೊಂದಿದ್ದಾರೆ.
ಈ ನಾಲ್ವರು ವ್ಯಕ್ತಿಗಳ ಬಗ್ಗೆ ಯಾವುದೇ ಸುಳಿವು ದೊರೆತಲ್ಲಿ ಸಾರ್ವಜನಿಕರು ದೊಡ್ಡಪೇಟೆ ಪೊಲೀಸ್ ಠಾಣೆಯ 08182-261414, 9972426144, 9480803345 ಅಥವಾ 6264571710 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…